ಬೆಂಗಳೂರಿನಲ್ಲಿ ಮತ್ತೆ ಮೊಳಗಿದ ಪಾಕ್ ಪರ ಘೋಷಣೆ…

147
firstsuddi

ಬೆಂಗಳೂರು : ನಿನ್ನೆ ಸಿಎಎ ವಿರೋಧಿ ಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ಅವರ ಹೇಳಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಮತ್ತೊಮ್ಮೆ ಪಾಕ್ ಪರ ಘೋಷಣೆ ಕೂಗುವ ಮೂಲಕ ವಿವಾದವನ್ನು ಸೃಷ್ಠಿಸಿದ್ದಾರೆ. ನಗರದ ಟೌನ್ ಹಾಲ್ ಬಳಿ ಅಮೂಲ್ಯ ಹೇಳಿಕೆಯನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಹಾಗೂ ಹಿಂದೂಪರ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಯುವತಿಯೊಬ್ಬಳು ಏಕಾಏಕಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗುತ್ತಾ ಬಂದಿದ್ದು, ಕೂಡಲೇ ಪೊಲೀಸರು ಯುವತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.