ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ಗ್ರಾಮದಲ್ಲಿ ತಹಶೀಲ್ದಾರ್ ಜೀಪಿಗೆ ಮುತ್ತಿಗೆ ಹಾಕಿ ಪ್ರತಿಭಟನೆ…

634

ಚಿಕ್ಕಮಗಳೂರು : ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ಗ್ರಾಮದಲ್ಲಿ ಕಳೆದ ೧೫ ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಡುತ್ತಿರುವ ಗ್ರಾಮಸ್ಥರು.ಹಲವಾರು ಬಾರಿ ಮನವಿ ಸಲ್ಲಿಸಿದರು, ಯಾವುದೇ ರೀತಿಯಲ್ಲಿಯೂ ಸ್ಪಂದಿಸದ ಹಿನ್ನಲೇ ಕುಡಿಯುವ ನೀರಿಗೆ ಆಗ್ರಹಿಸಿ ನೂರಾರು ಗ್ರಾಮಸ್ಥರು ತೀವ್ರ ಪ್ರತಿಭಟನೆಯನ್ನು ನಡೆಸಿದ್ದು, ರಸ್ತೆಗೆ ಅಡ್ಡಲಾಗಿ ಕುಳಿತು ಸ್ಥಳಕ್ಕೆ ಬಂದ ತಹಶೀಲ್ದಾರ್ ಭಾಗ್ಯರವರ ಜೀಪಿಗೆ ಮುತ್ತಿಗೆ ಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಸ್ಥಳಕ್ಕೆ ಬರುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.