ಕಸ್ತೂರಿ ರಂಗನ್ ವರದಿ ವಿರೋಧಿಸಿ ಬಾಳೆಹೊನ್ನೂರು ಪಟ್ಟಣ ಬಂದ್…

485

ಚಿಕ್ಕಮಗಳೂರು : ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ  ಪ್ರತಿಭಟನೆ ನಡೆಯುತ್ತಿದ್ದು , ಬಾಳೆಹೊನ್ನೂರು ಪಟ್ಟಣ ಬಂದ್ ಆಗಿದ್ದು, ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ನೀಡಿದ್ದಾರೆ. ಬಾಳೆಹೊನ್ನೂರಿನ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದ್ದು, ವರದಿ ಅನುಷ್ಠಾನಗೊಂಡರೆ  ಆಗುವ ಅನಾಹುತಗಳಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸ್ಥಳೀಯರು  ಸೇರಿದಂತೆ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು,  ವಿವಿಧ ಸಂಘಟನೆಗಳು ಹಾಗೂ ರೈತ ಸಂಘಟನೆಗಳಿಂದ ಬಂದ್ ಗೆ ಬೆಂಬಲ ನೀಡಲಾಗಿದೆ.