ಹುಬ್ಬಳ್ಳಿ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮಾತನಾಡಿ ರಾಹುಲ್ ಗಾಂಧಿ ಅವರು ಬೀದರ್ ನಿಂದ ಸ್ಪರ್ಧಿಸಲು ಮುಂದಾಗಿದ್ದಾರೆ, ಆದರೆ ಅವರ ಗೆಲುವು ಸಾಧ್ಯವಿಲ್ಲ , ಅವರು ರಾಜ್ಯದಲ್ಲಿ ಯಾವುದೇ ಕ್ಷೇತ್ರದಲ್ಲಿ ಸ್ಪರ್ದಿಸಿದರೂ ಗೆಲುವು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಮುಳುಗುತ್ತಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಅವರನ್ನು ಕಾಂಗ್ರೆಸ್ ಮುಖಂಡರು ಮಾದರಿ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.