ಬೀದರ್- ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ ‘ಜನಧ್ವನಿ ಸಮಾವೇಶ’ದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ನಿಮಗೆ 56 ಇಂಚಿನ ಎದೆ ಇದ್ದರೆ ಸಾಲಮನ್ನಾ ಮಾಡಿರುವ ಹಣದ ಅರ್ಧದಷ್ಟನ್ನು ಕರ್ನಾಟಕಕ್ಕೆ ನೀಡಿ ನೋಡೋಣ. ಎಂದು ರಾಹುಲ್ ಗಾಂಧಿ ಮೋದಿಗೆ ಸವಾಲು ಹಾಕಿದ್ದು, ಮೋದಿ ಅವರು ರೈತರ ಹೆಸರಲ್ಲಿ ದೊಡ್ಡ ದೊಡ್ಡ ಭಾಷಣ ಮಾಡುತ್ತಾರೆ ಆದರೆ ಕರ್ನಾಟಕದ ರೈತರ ಸಾಲಮನ್ನಾ ಮಾಡೋದಕ್ಕೆ ನೆರವು ನೀಡುವುದಿಲ್ಲ., 2014ರ ಲೋಕಸಭಾ ಚುನಾವಣೆ ಮುನ್ನ 2 ಕೋಟಿ ಯುವಕರಿಗೆ ಉದ್ಯೋಗದ ಭರವಸೆಯನ್ನು ನೀಡಿದ್ದರು. ಆದ್ರೆ ಇಂದು ಪಕೋಡಾ ಮಾರಾಟ ಮಾಡಿ ಅಂತಾ ಸಲಹೆ ನೀಡುತ್ತಿದ್ದಾರೆ. , ಪೆಟ್ರೋಲ್,ಡಿಸೇಲ್ ಬೆಲೆ ದಿನೇ ದಿನೇ ಹೆಚ್ಚುತ್ತಿದೆ. ರಫೆಲ್ ಡೀಲ್ ನಲ್ಲಿಯೂ ಮೋದಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ. ಫ್ರಾನ್ಸ್ ದೇಶದಿಂದ ಯುದ್ಧ ವಿಮಾನ ಖರೀದಿಸಿದರು. ಇದರ ಬದಲು ಯುದ್ಧ ವಿಮಾನಗಳ ತಯಾರಿಕೆ ನಮ್ಮ ದೇಶದಲ್ಲಿ ನಡೆದಿದ್ದರೆ, ಏರೋನಾಟಿಕಲ್ ಇಂಜೀನಿಯರಿಂಗ್ ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗುತ್ತಿತ್ತು ಎಂದು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.