ನವದೆಹಲಿ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು ರಫೇಲ್ ಒಪ್ಪಂದದಲ್ಲಿ ನಡೆದ ಅವ್ಯವಾಹರದ ಕುರಿತು ಚರ್ಚೆಯೇನಾದರೂ ಆದರೆ ನರೇಂದ್ರ ಮೋದಿ ಅವರು ಅಧಿಕಾರ ಕಳೆದುಕೊಳ್ಳುವುದು ಖಂಡಿತ. ಅನಿಲ್ ಅಂಬಾನಿಗೆ 30 ಸಾವಿರ ಕೋಟಿ ರೂಪಾಯಿಗಳನ್ನು ನೀಡಲು ಸಹಾಯ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೇ ಮಾಡಿದ ಡೀಲ್ ಇದು. ಅನಿಲ್ ಅಂಬಾನಿ ಡಸಾಲ್ಟ್ನಿಂದಲೇ ಹಣ ಪಡೆದು ಜಮೀನು ಖರೀದಿಸಿದ್ದಾರೆ. ರಫೇಲ್ ಡೀಲ್ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಹುಲ್ ಗಾಂಧಿ ಅವರು ನರೇಂದ್ರ ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.










