ಸಿಬಿಐ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಬಂಧನ…

263
firstsuddi

ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಸಿಬಿಐ ಮುಖ್ಯಕಚೇರಿಯ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಇತರೆ ನಾಯಕರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದ್ದಾರೆ. ದೆಹಲಿಯ ಸಿಬಿಐ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಮುಂಜಾಗೃತಾ ಕ್ರಮವಾಗಿ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯ ಮರೆಮಾಚಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.