ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ…

230
firstsuddi

ನವದೆಹಲಿ- ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ಲೋಕಸಭೆಯ ಚರ್ಚೆ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಪಾರ ಪ್ರಮಾಣದ ಅವ್ಯವಹಾರವಾಗಿದೆ. ಇದಕ್ಕೆ ಮೋದಿ ಅವರು ಉತ್ತರ ನೀಡಲೇಬೇಕು. ಪ್ರಧಾನಿ ಚೌಕಿದಾರ ಅಲ್ಲ, ಭಾಗೀದಾರ ಎಂದು ರಾಹುಲ್ ಗಾಂಧಿ ಲೇವಡಿ ಮಾಡಿದರು, ಮೋದಿಯವರು ಕೊಟ್ಟ ಯಾವ ಭರವಸೆಯನ್ನೂ ಉಳಿಸಿಕೊಂಡಿಲ್ಲ. ಎಲ್ಲರ ಖಾತೆಗಳಿಗೆ 15 ಲಕ್ಷ ಹಾಕುತ್ತೇನೆ ಎಂದು ಮೋಸ ಮಾಡಿದ್ದು. 4 ಕೋಟಿ ಯುವಕರಿಗೆ ಉದ್ಯೋಗ ಕೊಡುವುದಾಗಿ ವಂಚಿಸಿದರು. ಕೇವಲ 4 ಲಕ್ಷ ಜನರಿಗೆ ಮಾತ್ರ ಉದ್ಯೋಗ ದೊರಕಿದ್ದು. ಹೇಳದೇ ಕೇಳದೆ ರಾತ್ರಿ 8 ಗಂಟೆಯಲ್ಲಿ ನೋಟುಗಳನ್ನು ಅಮಾನ್ಯಗೊಳಿಸಿ ಜನರನ್ನು ಸಂಕಷ್ಟಕ್ಕೆ ದೂಡಿದ್ದು ಜಿ ಎಸ್ ಟಿ ಯಿಂದಾಗಿ ಜನತೆ ಸಮಸ್ಯೆ ಎದುರಿಸುವಂತಾಯಿತು ಎಂದು ಅವರು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.