ಬೆಂಗಳೂರು: ಇಷ್ಟು ದಿನ ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ರಾಜ್ಯದ ಜನರಿಗೆ ನಾಳೆಯಿಂದ ಮಳೆರಾಯ ಎಲ್ಲರನ್ನ ಕೂಲ್ ಮಾಡುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರ, ಕೇರಳ ಹಾಗೂ ಶ್ರೀಲಂಕಾದಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ತಮಿಳುನಾಡು ಹಾಗೂ ಕೇರಳದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಇದರ ಪರಿಣಾಮ ಕರ್ನಾಟಕದಲ್ಲಿ ಕೂಡ ಮಳೆಯಾಗಲಿದೆ. ಇದರ ಪರಿಣಾಮ ರಾಜ್ಯದ ಹಲವು ಭಾಗದಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪ್ರತಿಕ್ರಿಯೆ ನೀಡಿ, ನಾಳೆಯಿಂದ ರಾಜ್ಯಧ ವಿವಿಧ ಭಾಗದಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 15 ರಿಂದ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುವ ಸಂಭವಿದ್ದು, ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಕೂಡ ತುಂತುರು ಮಳೆಯಾಗುವ ಸಂಭವವಿದೆ ಎಂದು ಮಾಹಿತಿ ನೀಡಿದ್ದಾರೆ.