ಚೆನ್ನೈ : ನಟ ಕಮಲ್‌ಹಾಸನ್ ತಮ್ಮ 63ನೇ ಹುಟ್ಟುಹಬ್ಬದ ದಿನ ರಾಜಕೀಯ ಪಕ್ಷ ಸ್ಥಾಪನೆಯ ಘೋಷಣೆ ಮಾಡಿದ ಬೆನ್ನಲ್ಲೇ, ಮತ್ತೊಬ್ಬ ಸೂಪರ್‌ಸ್ಟಾರ್ ರಜನೀಕಾಂತ್ ಕೂಡಾ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. ಡಿ.12ಕ್ಕೆ ರಜನೀಕಾಂತ್ ತಮ್ಮ 67ನೇ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಅಂದು ತಮ್ಮ ರಾಜಕೀಯ ಪ್ರವೇಶದ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ರಜನಿ, ಹಲವು ವಿಷಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರಗಳನ್ನು ಬಹಿರಂಗವಾಗಿಯೇ ಬೆಂಬಲಿಸಿದ್ದಾರಾದರೂ, ಅವರು ಬಿಜೆಪಿ ಸೇರುವ ಸಾಧ್ಯತೆ ಇಲ್ಲ. ಜೊತೆಗೆ ತಮಿಳುನಾಡಿನ ಇತರೆ ಪ್ರಾದೇಶಿಕ ಪಕ್ಷಗಳ ಜತೆ ಹೋಗುವ ಬದಲಿಗೆ, ತಮ್ಮದೇ ಆದ ಹೊಸ ಪಕ್ಷ ರಚಿಸುವ ಸಾಧ್ಯತೆ ನಿಚ್ಚಳವಾಗಿದೆ ಎನ್ನಲಾಗಿದೆ.