ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನವೆಂಬರ್ 15 ರಂದು ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 63 ಸಾಧಕರಿಗೆ ಈ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತದೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆ ಪಟ್ಟಿ ತಯಾರಿಸಿದ್ದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ ಎಂದು ಜಯಮಾಲಾ ಅವರು ತಿಳಿಸಿದ್ದು, ಬೆಂಗಳೂರಿನ ರವೀಂದರ್ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.










