ಹುಬ್ಬಳ್ಳಿ: ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಮತ್ತು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಮಾನವಾಗಿ ಖಾತೆ ಹಂಚಿಕೆ ಮಾಡಲಾಗಿದೆ. ರಮೇಶ್ ಜಾರಕಿಹೊಳಿ ಅವರಿಗೆ ಮಂತ್ರಿ ಸ್ಥಾನ ತಪ್ಪಿದಕ್ಕೆ ಅಸಮಾಧಾನವಿದೆ. ಆದರೆ ರಮೇಶ್ ಜಾರಕಿಹೊಳಿ ಅವರು ಹುಟ್ಟು ಕಾಂಗ್ರೆಸ್ಸಿಗ. ಅವರು ಪಕ್ಷವನ್ನು ಬಿಟ್ಟು ಹೋಗುವುದಿಲ್ಲ ಎಂದಿದ್ದಾರೆ. ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಯಿಸಿದ ಸಿದ್ದರಾಮಯ್ಯ ಅವರು ಬಿಜೆಪಿ ಅವರಿಗೆ ಮಾಡಲು ಕೆಲಸವಿಲ್ಲ. ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.