ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆ ರಮೇಶ್ ಜಾರಕಿಹೊಳಿ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ರಮೇಶ್ ಜಾರಕಿಹೊಳಿ ಅವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು, ಅವರ ನಡೆ ನಿಗೂಢವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಹೇಳಿಕೆಗೆ ನಾನು ಬದ್ಧ. ಇನ್ನು 4 ದಿನಗಳು ಸಮಯಬೇಕು ನಂತರ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುತ್ತೇನೆ ಎಂದಿದ್ದರು ಇದೀಗ ಅವರ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.