ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೊಯ್ ಅಧಿಕಾರ ಸ್ವೀಕಾರ…

355
firstsuddi

ನವದೆಹಲಿ: ಭಾರತದ 46ನೇ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೋಯ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಂಜನ್ ಗೊಗೋಯ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.ಪ್ರಮಾಣವಚನ ಕಾರ್ಯಕ್ರಮಕ್ಕೆ ಸುಪ್ರೀಂ ಕೋರ್ಟ್ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಸೇರಿದಂತೆ ಸುಪ್ರೀಂ ಕೋರ್ಟ್ ಹಲವು ನ್ಯಾಯಾಧೀಶರು, ಕೇಂದ್ರ ಸರ್ಕಾರದ ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.