ಬಂಟ್ವಾಳ : ಅಪ್ರಾಪ್ತ ಮಗಳ ಮೇಲೆ ತನ್ನ ತಂದೆಯೇ ಮೂರು ವರ್ಷಗಳಿಂದ ಅತ್ಯಾಚಾರ ಎಸಗಿರುವ ಪ್ರಕರಣ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಅಸ್ವಸ್ಥಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮುಕ ತಂದೆಯೊಬ್ಬ ಕಳೆದ ಮೂರು ವರ್ಷಗಳಿಂದ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗುತ್ತಿದ್ದು, ಸೋಮವಾರ ಕೂಡಾ ಮನೆಯಲ್ಲಿ ಯಾರು ಇಲ್ಲದ ವೇಳೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದರಿಂದ ತೀವ್ರ ಅಸ್ವಸ್ಥಳಾಗಿದ್ದ ಮಗಳನ್ನು ಆಸ್ಪತ್ರೆಗೆ ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ಕಾಮುಕ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.










