ಚಾಮರಾಜನಗರ : ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಗಾಳಿಪುರ ಬಡಾವಣೆಯಲ್ಲಿ ನಡೆದಿದೆ. ಮಹಮ್ಮದ್ ಮುಷ್ತಾಕ್ ಅತ್ಯಾಚಾರ ಎಸಗಿರುವ ಪಾಪಿ ತಂದೆ. ಆಟೋ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿರುವ ಮುಷ್ತಾಕ್ ಅವರಿಗೆ ಇಬ್ಬರು ಪತ್ನಿಯರಿದ್ದು, ಜನವರಿ 31ರಂದು ತನ್ನ ಎರಡನೇ ಪತ್ನಿ ಕೆಲಸದ ನಿಮಿತ್ತ ತನ್ನ ಮಗಳನ್ನು ಮುಷ್ತಾಕ್ ಅವರ ಮೊದಲ ಪತ್ನಿಯ ಮನೆಯಲ್ಲಿ ಬಿಟ್ಟು ಹೋಗಿದ್ದರು ಎನ್ನಲಾಗಿದ್ದು, ಈ ವೇಳೆ ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಪಾಪಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದು, ಪತಿಯ ವಿರುದ್ಧ ತನ್ನ ಎರಡನೇ ಪತ್ನಿ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ










