ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿ ವಿರೋಧ ಪಕ್ಷದವರು ಸಮ್ಮಿಶ್ರ ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಆದರೆ ಅಂದು ಬಿ.ಜೆ.ಪಿ ಮತ್ತು ಜೆ.ಡಿ.ಎಸ್ ಸಮ್ಮಿಶ್ರ ಸರ್ಕಾರ ಅಪವಿತ್ರ ಸರ್ಕಾರ ಆಗಿಲ್ಲದ್ದು ಈಗ ಎಲ್ಲಿಂದ ಬಂತು ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದು. ನಂತರ ನಾನು ಮಹಾಭಾರತದ ಕರ್ಣನಂತೆ ಸಾಂದರ್ಭಿಕ ಶಿಶು. ನಾನು ಮತ್ತು ಕರ್ಣ ಇಬ್ಬರೂ ಒಂದೇ ಎಂದು ಹೇಳಿದ್ದು ಹಾಗೂ ಸಮ್ಮಿಶ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಆದ ನನಗೆ ಅಪ್ಪ-ಅಮ್ಮ ಇಲ್ಲವೆಂದು ಹೀಯಾಳಿಸುತ್ತಿದ್ದಾರೆ.. ಆದರೆ ನನಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಅಪ್ಪ, ಅಮ್ಮನ ಸ್ಥಾನದಲ್ಲಿದ್ದು, ದೇವರ ಆಶೀರ್ವಾದ ಹಾಗೂ ಕಾಂಗ್ರೆಸ್ ಪಕ್ಷದ ಸಹಕಾರದಿಂದ ಮುಖ್ಯಮಂತ್ರಿಯಾಗಿದ್ದು ನಾನು ಮಹಾಭಾರತದ ಕರ್ಣನಂತೆ ಸಾಂದರ್ಭಿಕ ಶಿಶು ಎಂದು ವಿಧಾನಸಭೆಯಲ್ಲಿ ತಿಳಿಸಿದ್ದಾರೆ