ದೆಹಲಿ :ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಒಡಿಶಾ ಹಾಗೂ ಆಂಧ್ರಪ್ರದೇಶದಲ್ಲಿ ಚಂಡಮಾರುತ ಉಂಟಾಗುವ ಸಾಧ್ಯತೆ ಇದ್ದು, ಒರಿಸ್ಸಾ, ಆಂಧ್ರಪ್ರದೇಶ ಕರಾವಳಿ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಆ ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.ಬಂಗಾಳಕೊಲ್ಲಿಯಲ್ಲಿ ಉಗಮವಾಗಿರುವ ಈ ಚಂಡಮಾರುತಕ್ಕೆ ‘ತಿತ್ಲಿ’ ಎಂದು ಕರೆಯಲಾಗಿದೆ.










