ನೀರವ್ ಮೋದಿ ವಿರುದ್ದ ರೆಡ್ ಕಾರ್ನರ್ ನೋಟಿಸ್ ಜಾರಿ …

287

ನವದೆಹಲಿ- ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಜ್ರಾಭರಣ ವ್ಯಾಪಾರಿ ನೀರವ್ ಮೋದಿಗೆ ರೆಡ್ ಕಾರ್ನರ್ ನೋಟಿಸ್ ನೀಡುವಂತೆ ಸಿಬಿಐ ಇಂಟರ್ ಪೋಲ್ ಗೆ ಪತ್ರ ಬರೆದಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ದೇಶದಲ್ಲಿದ್ದರೂ ಬಂಧಿಸುವ ಸಾಧ್ಯತೆ ಇದೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ನೀರವ್‌ ಮೋದಿ ಅವರಿಗೆ  ರೆಡ್‌ ಕಾರ್ನರ್‌ ನೋಟಿಸ್‌ ಜಾರಿಯಾಗಿದೆ. ನೀರವ್ ಮೋದಿ ಅವರ ಅಂಕಲ್, ಗೀತಾಂಜಲಿ ಜೆಮ್ಸ್ ನ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದೆ.ಹಗರಣದ ವಿಚಾರಣೆಗೆ ಹಾಜರಾಗುವಂತೆ ನಾಲ್ಕು ಬಾರಿ ಸಮನ್ಸ್ ನೀಡಿದರೂ ಆರೋಪಿಗಳಿಂದ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ಈಗ ರೆಡ್ ಕಾರ್ನರ್ ನೋಟಿಸ್ ನೀಡಲಾಗಿದೆ.