ಜನಾರ್ದನ ರೆಡ್ಡಿ ಗೆ  ಇಂದು ಸಿಗಲಿಲ್ಲ ಜಾಮೀನು…

208
firstsuddi

ಬೆಂಗಳೂರು : ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಭಾನುವಾರ ಬಂಧನಕ್ಕೆ ಒಳಗಾಗಿರುವ ಅವರು  ನಿನ್ನೆ ಜಾಮೀನು ಅರ್ಜಿ ಸಲ್ಲಿಸುವ ಸಿದ್ಧತೆ ನಡೆಸಿದ್ದರು  ಆದರೆ  ಕೇಂದ್ರ ಸಚಿವ ಅನಂತ ಕುಮಾರ್ ಅವರ ನಿಧನದಿಂದಾಗಿ ನ್ಯಾಯಾಲಯಗಳಿಗೆ ರಜೆ ಘೋಷಿಸಲಾಗಿತ್ತು. ಈ  ಹಿನ್ನಲೆಯಲ್ಲಿ ಒಂದನೇ  ಎಸಿಎಂಎಂ ನ್ಯಾಯಾಲಯಕ್ಕೆ ಇಂದು ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬಳಿಕ ನಾಳೆಗೆ ತೀರ್ಪನ್ನು ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ಇನ್ನು ಒಂದು ದಿನ ರೆಡ್ಡಿ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.