ಪುಲ್ವಾಮ ದಾಳಿಗೆ ಪ್ರತೀಕಾರ – ಬಾಲಕೋಟ್ ವೈಮಾನಿಕ ದಾಳಿಗೆ ಒಂದು ವರ್ಷ…

214
firstsuddi

ನವದೆಹಲಿ : ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತ ಬಾಲಾಕೋಟ್‍ನಲ್ಲಿ ಏರ್‌ಸ್ಟ್ರೈಕ್‌ ನಡೆಸಿ ಇಂದಿಗೆ ಒಂದು ವರ್ಷ ಕಳೆದಿದೆ. ಕಳೆದ ವರ್ಷ ಫೆ.14ರಂದು ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರ ಅಟ್ಟಹಾಸಕ್ಕೆ ಭಾರತೀಯ ಸೇನೆಯ 40 ಮಂದಿ ಸಿ.ಆರ್.ಪಿ.ಎಫ್ ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತಿಯಾಗಿ ಪುಲ್ವಾಮ ದಾಳಿ ನಡೆದ 12ನೇ ದಿನಕ್ಕೆ ಭಾರತ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಬೇಕೆಂದು ನಿರ್ಧರಿಸಿ ಕಳೆದ ವರ್ಷ ಫೆ.26ರಂದು ನಸುಕಿನ ಜಾವ 3:30 ರಿಂದ 3.55ರ ಅವಧಿಯಲ್ಲಿ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಸುಮಾರು 85 ಕಿ.ಮೀ ಒಳನುಗ್ಗಿದ 12 ಮಿರಾಜ್-2000 ಯುದ್ಧ ವಿಮಾನಗಳು ಜೈಷ್ ಉಗ್ರರ ತರಬೇತಿ ಕೇಂದ್ರಗಳ ಮೇಲೆ ದಾಳಿ ನಡೆಸಿ ಸುಮಾರು 300 ಉಗ್ರರನ್ನು ಹೊಡೆದುರುಳಿಸಿತ್ತು. ಬಳಿಕ ಬಾಲಕೋಟ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಪಾಕ್ ತನ್ನ ಮೂರು ಎಫ್-16 ಯುದ್ಧ ವಿಮಾನಗಳ ಮೂಲಕ ಭಾರತದ ಮೇಲೆ ದಾಳಿ ನಡೆಸಲು ಮುಂದಾಗಿತ್ತು. ಇದರಿಂದ ತಕ್ಷಣ ಎಚ್ಚೆತ್ತ ಭಾರತ ಮಿಗ್-21 ಯುದ್ಧ ವಿಮಾನಗಳನ್ನು ಪಾಕ್ ವಿಮಾನಗಳನ್ನು ಹಿಮ್ಮೆಟ್ಟಿಸಲು ಮುಂದೆ ಬಿಟ್ಟಿತ್ತು. ಈ ವೇಳೆ ಮಿಗ್-21 ಯುದ್ಧ ವಿಮಾನದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ಪಾಕ್‍ನ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದರು.