ಚಿಕ್ಕಮಗಳೂರು : ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಹಿರೇಮಗಳೂರಿನ ಬಿ.ಎನ್.ಶ್ರೀನಿವಾಸಮೂರ್ತಿ ನಿಧನ…

158
firstsuddi

ಚಿಕ್ಕಮಗಳೂರು : ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಹಿರೇಮಗಳೂರಿನ ಬಿ.ಎನ್.ಶ್ರೀನಿವಾಸಮೂರ್ತಿ (64) ಅವರು ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.ಹಿರೇಮಗಳೂರಿನ ಶ್ರೀದೇವಿ ಕುಟುಂಬದ ಹಿರಿಯರಾದ ಶ್ರೀನಿವಾಸಮೂರ್ತಿ ಜಿಲ್ಲೆಯ ಬಣಕಲ್‍ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು.
ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಸಹೋದರ ಶ್ರೀದೇವಿ ಮೋಹನ್ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟಗಲಿದ್ದಾರೆ.ಮೃತರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಹಿರೇಮಗಳೂರಿನ ರುದ್ರಭೂಮಿಯಲ್ಲಿ ಶನಿವಾರ ಸಂಜೆ ನಡೆಯಿತು.