ಕ್ಯಾನ್ಸರ್ ನಿಂದ ಬಳಲುತ್ತಿರುವ ಮಕ್ಕಳಿಗೆ ಕೂದಲು ದಾನ ಮಾಡಿದ ಆ್ಯಕ್ಷನ್ ಪ್ರಿನ್ಸ್…

171
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ನಟ ಧ್ರುವ ಸರ್ಜಾ ಅವರು ತಮ್ಮ ಕೂದಲನ್ನು ಕ್ಯಾನ್ಸರ್ ಪೀಡಿತ ಮಕ್ಕಳಿಗೆ ದಾನ ಮಾಡುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. ಧ್ರುವ ಸರ್ಜಾ ಅವರು ತಮ್ಮ “ಪೊಗರು” ಸಿನಿಮಾಕ್ಕಾಗಿ ಕಳೆದ 2 ವರ್ಷಗಳಿಂದ ಕೂದಲನ್ನು ಬೆಳೆಸಿದ್ದು, ಸಿನಿಮಾ ಚಿತ್ರೀಕರಣ ಸಂಪೂರ್ಣವಾಗಿ ಮುಗಿದ ಹಿನ್ನೆಲೆ, ಧ್ರುವ ಸರ್ಜಾ ಅವರು ತಮ್ಮ ಕೂದಲನ್ನು ಕಟ್ ಮಾಡಿಸಿದ್ದು, ಈ ಕೂದಲನ್ನು ಕ್ಯಾನ್ಸರ್ ನಿಂದ ಬಳಲುತ್ತಿರುವ ಮಕ್ಕಗೆ ನೀಡುವುದಾಗಿ ಹೇಳಿದ್ದಾರೆ.
ನಂದಕಿಶೋರ್ ನಿರ್ದೇಶನದ “ಪೊಗರು” ಚಿತ್ರದಲ್ಲಿ ಧ್ರುವ ಸರ್ಜಾ ಅವರಿಗೆ ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿ ಕಾಣಿಸಿಕೊಂಡಿದ್ದು, “ಪೊಗರು ಚಿತ್ರವನ್ನು ಡಿ. 25ರ ಕ್ರಿಸ್‍ಮಸ್ ಹಬ್ಬದಂದು ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.