ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದೂ ಕೂಡಾ ಜಾಮೀನು ಕೈತಪ್ಪಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೆ.19ಕ್ಕೆ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರಿಗೆ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಇಂದು ನ್ಯಾಯಾಲಯ ನಟಿ ರಾಗಿಣಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೊತ್ತಿಕೊಂಡಿತ್ತು. ಈ ವೇಳೆ ಸಿಸಿಬಿ ಪರ ವಕೀಲರು ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕೆಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆ ಎನ್ಡಿಪಿಎಲ್ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.










