ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ-ನಟ ದಿಗಂತ್ ಗೆ ಮತ್ತೊಮ್ಮೆ ಸಿಸಿಬಿ ನೊಟೀಸ್…

132
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ನಟ ದಿಗಂತ್ ಅವರಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಿದ್ದಾರೆ. ಇದಕ್ಕೂ ಮೊದಲು ಸೆ. 16ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೈ ಅವರು ಸಿಸಿಬಿ ವಿಚಾರಣೆಯನ್ನು ಎದುರಿಸಿದ್ದರು. ದಿಗಂತ್ ಮತ್ತು ಐಂದ್ರಿತಾ ರೇ ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಸಿಸಿಬಿ ಅಧಿಕಾರಿಗಳು 4 ರಿಂದ 5 ಗಂಟೆ ವಿಚಾರಣೆ ನಡೆಸಿದ್ದರು. ಬಳಿಕ ಇಬ್ಬರ ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ವಶಕ್ಕೆ ಪಡೆದಿರುವ ಫೋನ್‍ಗಳಲ್ಲಿ ಕೆಲವು ಮಾಹಿತಿಗಳನ್ನು ರಿಟ್ರೀವ್ ಮಾಡಲಾಗಿದೆ ಎನ್ನಲಾಗಿದ್ದು, ಈ ಹಿನ್ನೆಲೆ ಸಿಸಿಬಿ ಅಧಿಕಾರಿಗಳು ನಟ ದಿಗಂತ್ ಅವರಿಗೆ ಇಂದು ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ಮತ್ತೊಮ್ಮೆ ನೊಟೀಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.