ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಮುತ್ತಪ್ಪರೈ ಅವರ ಪುತ್ರ ರಿಕ್ಕಿ ರೈ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ರಿಕ್ಕಿ ರೈ ಮನೆಗೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು ತಪಾಸಣೆ ನಡೆಸಿ ರಿಕ್ಕಿ ರೈ ಅವರನ್ನು ಚಾಮರಾಜಪೇಟೆಯಲ್ಲಿ ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಕರೆದುಕೊಂಡು ಹೋಗಿದ್ದಾರೆ.
ರಿಕ್ಕಿ ರೈ ಅವರಿಗೆ ಈಗಾಗಲೇ ಡ್ರಗ್ಸ್ ಪ್ರಕರಣದಲ್ಲಿ ಬಂಧನವಾಗಿರುವ ಹಲವು ಆರೋಪಿಗಳೊಂದಿಗೆ ಸಂಪರ್ಕವಿತ್ತು ಎಂಬ ಖಚಿತ ಮಾಹಿತಿಯನ್ನು ತಿಳಿದ ಸಿಸಿಬಿ ಅಧಿಕಾರಿಗಳು ರಿಕ್ಕಿ ಅವರ ನಿವಾಸದ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.










