ಹಾಸನ : ಎಲ್ಲಾ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಅನುಷ್ಠಾನಗೊಳ್ಳುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಶ್ರೇಯೋಭಿವೃದ್ದಿ ಯೋಜನೆಗೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ 15 ದಿನಗಳೊಳಗೆ ಫಲಾನುಭವಿಗಳ ಪಟ್ಟಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು ಗಡುವು ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2017-18 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಕಳೆದ ತಿಂಗಳು ನಡೆದ ಸಭೆಯಲ್ಲಿ ಕ್ಷೇತ್ರವಾರು ಶಾಸಕರಿಂದ ಫಲಾನುಭವಿಗಳ ಪಟ್ಟಿ ಅನುಮೋದನೆ ಪಡೆದು ಸಲ್ಲಿಸುವಂತೆ ಸೂಚಿಸಲಾಗಿತ್ತಾದರೂ ಈವರೆಗೆ ನಿರೀಕ್ಷಿತ ಪ್ರಗತಿ ಕಂಡು ಬಂದಿಲ್ಲ. ಕಡೆಯದಾಗಿ 15 ದಿನಗಳ ಕಾಲಾವಕಾಶ ನೀಡಲಾಗುವುದು. ಈಗಾಗಲೇ ಆರ್ಥಿಕ ವರ್ಷ ಕೊನೆಯಾಗುವ ಹಂತ ಬರುತ್ತಿದೆ ಕಡೆ ಕ್ಷಣದಲ್ಲಿ ಫಲಾನುಭವಿಗಳ ಆಯ್ಕೆ ಸಾಧುವಲ್ಲ ಎಂಬುದನ್ನು ಎಲ್ಲಾ ಅಧಿಕಾರಿಗಳು ಮನಗಂಡು ಜನಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಟ್ಟು ಪಟ್ಟಿ ಸಿದ್ದಪಡಿಸಿ ಸಲ್ಲಿಸಿ ಎಂದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಕರಾದ ಶ್ರೀಧರ್ ಇಲಾಖಾವಾರು ಪ್ರಗತಿ ವರದಿಯನ್ನು ಸಭೆಗೆ ಮಂಡಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.