ಕೊಪ್ಪ : ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ 11 ವರ್ಷದ ಬಾಲಕಿಯನ್ನ ಬರ್ಬರವಾಗಿ ಹತ್ಯೆ ನಡೆಸಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಲ್ಲಗದ್ದೆ ಸಮೀಪದ ಕೆಸಗೋಡುವಿನಲ್ಲಿ ನಡೆದಿದೆ. ಶನಿವಾರ ಮಧ್ಯಾಹ್ನ ವಿದ್ಯಾರ್ಥಿನಿ ಆಟೋ ಇಳಿದು ಕಾಡಿನ ಕಾಲು ದಾರಿಯಲ್ಲಿ ಮನೆಗೆ ಹೋಗುವಾಗ ಅತ್ಯಾಚಾರ ಎಸಗಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಹರಿಹರಪುರ ಠಾಣಾ ಪೊಲೀಸರು ಸುಮುಖ ಎಂಬ ಸ್ಥಳಿಯ ಯುವಕನನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿದ್ಯಾರ್ಥಿನಿಯ ಮೃತದೇಹವನ್ನ ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಪ್ರಕರಣದ ಸತ್ಯಾಂಶ ಹೊರಬರಲಿದೆ. ಸರ್ಕಾರಿ ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದ್ದು, ಆಸ್ಪತ್ರೆ ಎದುರು ನೂರಾರು ಗ್ರಾಮಸ್ಥರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.