ಛತ್ತೀಸ್‍ಗಢದ : ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯ ಜಗರ್‍ಗುಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ನಕ್ಸಲರು ಶಸ್ತ್ರಾಸ್ತ್ರ ಸಹಿತವಾಗಿ ಬೀಡುಬಿಟ್ಟಿದ್ದಾರೆ ಎಂಬ ಮಾಹಿತಿ ತಿಳಿದ ಡಿಆರ್‍ಜಿ, ಸಿಆರ್‍ಪಿಎಫ್ ಹಾಗೂ ಕೋಬ್ರಾ ಪಡೆ ಸೇರಿದಂತೆ ವಿವಿಧ ರಕ್ಷಣಾ ಪಡೆಗಳು ಸೇರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ನಾಲ್ವರು ನಕ್ಸಲರನ್ನು ಹೊಡೆದುರುಳಿಸಲಾಗಿದ್ದು, ಅವರ ಬಳಿ ಇದ್ದ 303 ರೈಫಲ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.










