ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ. ರಾಜಶೇಖರನ್ ವಿಧಿವಶ…

174
firstsuddi

ಬೆಂಗಳೂರು : ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಎಂ.ವಿ. ರಾಜಶೇಖರನ್(93) ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಎಂ.ವಿ. ರಾಜಶೇಖರನ್ ಅವರು ತಮ್ಮ ಪತ್ನಿ ಗಿರಿಜಾ, ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.