ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ಅವರು ವಿಧಿವಶ…

191
firstsuddi

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಚರಣ್ ರೆಡ್ಡಿ ಅವರನ್ನು ಜೈನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 7ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು 1993ರ ಬ್ಯಾಚ್‍ನ ಅಧಿಕಾರಿಯಾಗಿದ್ದು, ಇವರು ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ, ಅಕ್ರಮ ಮರಳು ಗಣಿಗಾರಿಕೆ ಪ್ರಕರಣದ ಲೋಕಾಯುಕ್ತ ಎಸ್‍ಐಟಿ ಮುಖ್ಯಸ್ಥರಾಗಿ ಹಾಗೂ ಸಿಬಿಐನಲ್ಲಿ 5 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇನ್ನು ಮೃತರ ಪಾರ್ಥೀವ ಶರೀರವನ್ನು ಸಂಜಯ ನಗರದ ತಮ್ಮ ನಿವಾಸದ ಬಳಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಬಳಿಕ ಅಂತ್ಯಸ್ಕಾರವನ್ನು ನೆರವೇರಿಸಲಿದ್ದಾರೆ. ಇವರ ನಿಧನಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.