ಹಿರಿಯ ಪತ್ರಕರ್ತ ಕುಲದೀಪ್ ನಯ್ಯರ್ ಇನ್ನಿಲ್ಲ.

381
firstsuddi

ನವದೆಹಲಿ – ಹಿರಿಯ ಪತ್ರಕರ್ತ ಕುಲದೀಪ್ ನಯ್ಯರ್(95 ) ದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಇಂದು ಕೊನೆಯುಸಿರೆಳೆದಿದ್ದು, ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದ ಸಂದರ್ಭದಲ್ಲಿ ಜೈಲು ಸೇರಿದ್ದ ಪತ್ರಕರ್ತರಲ್ಲಿ ಕುಲದೀಪ್ ನಯ್ಯರ್ ಸಹ ಒಬ್ಬರಾಗಿದ್ದರು.  ಬ್ರಿಟನ್ ಗೆ ಭಾರತದ ಹೈ ಕಮಿಷನರ್ ಆಗಿಯೂ ಅವರು ಸೇವೆ ಸಲ್ಲಿಸಿದ್ದು, 12ಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ ದಕ್ಷತೆ, ನಿಷ್ಠೆ, ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವಕ್ಕೆ ಕುಲದೀಪ್ ನಯ್ಯರ್ ಹೆಸರಾಗಿದ್ದು, ಪತ್ರಿಕೋದ್ಯಮದಲ್ಲಿ ಜೀವಮಾನ ಸಾಧನೆಗಾಗಿ ಅವರಿಗೆ 2016ರಲ್ಲಿ ಶಾಹೀದ್ ನಿಯೋಗಿ ಸ್ಮಾರಕ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳು ಲಭಿಸಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ದೆಹಲಿಯ ಲೋಧಿ ರುದ್ರ ಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಕುಲದೀಪ್ ನಯ್ಯರ್ ಅವರ ನಿಧನಕ್ಕೆ ರಾಷ್ಟ್ರಪತಿ ರಮಾನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಡಾ.ಮನಮೋಹನ್ಸಿಂಗ್, ರಾಹುಲ್ಗಾಂಧಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.