ಬೆಂಗಳೂರು: ಕನ್ನಡದ ಹಿರಿಯ ನಟ, ನಿರ್ದೇಶಕ ಕಾಶೀನಾಥ್ ಆನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅನುಭವ, ಅಜಗಜಾಂತರ, ಅನಂತನ ಅವಾಂತರ, ಅಪರಿಚಿತ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ, ನಿರ್ದೇಶಿಸಿದ್ದ ನಟ ಕಾಶೀನಾಥ್ ಮೃತಪಟ್ಟಿದ್ದಾರೆ. ಇತ್ತೀಚಿಗೆ ನಂದ ಕಿಶೋರ್ ನಿರ್ದೆಶನದ ಚೌಕಾ ಚಿತ್ರದಲ್ಲೂ ನಟಿಸಿದ್ದರು. ಅನಾರೋಗ್ಯದ ಕಾರಣ ಕಳೆದ 2 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಟ ಉಪೇಂದ್ರ, ಸಂಗೀತ ನಿರ್ದೇಶಕ ವಿ. ಮನೋಹರ್, ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಸೇರಿದಂತೆ ಹಲವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು.