ದೆಹಲಿ : ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್ (71) ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಅಹ್ಮದ್ ಪಾಟೇಲ್ ಅವರು ಬಹು ಅಂಗಾಂಗ ವೈಫಲ್ಯದಿಂದಲೂ ಬಳಲುತ್ತಿದ್ದರು. ಈ ಹಿನ್ನೆಲೆ, ದೆಹಲಿಯ ಮೇದಾಂತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:30ರ ಸುಮಾರಿಗೆ ಆಸ್ಪತ್ರೆಯಲ್ಲೇ ವಿಧಿವಶರಾಗಿದ್ದಾರೆ. ಅಹ್ಮದ್ ಪಟೇಲ್ ಅವರು ಲೋಕಸಭೆಗೆ 3 ಬಾರಿ ಹಾಗೀ 5 ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅಲ್ಲದೇ ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.










