ಹುಬ್ಬಳ್ಳಿ : ಪ್ರಸಿದ್ಧ ಹಿರಿಯ ಸಾಹಿತಿ, ಹೆಸರಾಂತ ಪತ್ರಕರ್ತ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಸಿದ್ಧ ಸಾಹಿತಿಯಾಗಿ, ಕನ್ನಡದ ಹೋರಾಟಗಾರರಾಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದರು. ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ, ಟಿಎಸ್‍ಆರ್ ಪ್ರಶಸ್ತಿ, ಕರ್ನಾಟಕ ವವಿಯಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ದೊರಕಿವೆ.










