ಬೆಂಗಳೂರು: ಹೃದಯ, ಕಿಡ್ನಿ ಹಾಗೂ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಪ್ರಸಿದ್ಧ ಕವಿ, ಲೇಖಕ ಸುಮತೀಂದ್ರ ನಾಡಿಗ(83) ಅವರು, ಫೋರ್ಟಿಸ್ ಆಸ್ಪತ್ರೆಯಲ್ಲಿ ಒಂದು ವಾರದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 6.30ಕ್ಕೆ ಮೃತಪಟ್ಟಿದ್ದಾರೆ. ಮೂಲತಃ ಚಿಕ್ಕಮಗಳೂರಿನ ಕಳಸದಲ್ಲಿ ಜನಿಸಿದ್ದ ಸುಮತೀಂದ್ರ ನಾಡಿಗ ಅವರು ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದು, ಕಾವ್ಯ, ಕಥನ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ಸೇವೆ ಸಲ್ಲಿಸಿದ್ದರು. ಇಂದು ಸಾರಕ್ಕಿ ಸಮೀಪದ ಮೆಟ್ರೋ ನಿಲ್ದಾಣದ ಬಳಿಯಿರುವ ಮಯಾ ಇಂದ್ರ ಪ್ರಸ್ಥ ಅಪಾರ್ಟ್ ನಿವಾಸದ ಕಮ್ಯುನಿಟಿ ಸಭಾಂಗಣದಲ್ಲಿ ಬೆಳಿಗ್ಗೆ 11ರಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.