ಹಿರಿಯ ವಿಜ್ಞಾನಿ ರೊದ್ದಂ ನರಸಿಂಹ ನಿಧನ…

135
firstsuddi

ಬೆಂಗಳೂರು : ಹಿರಿಯ ವಿಜ್ಞಾನಿ ರೊದ್ದಂ ನರಸಿಂಹ (87) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ರೊದ್ದಂ ನರಸಿಂಹ ಅವರಿಗೆ ಕಳೆದ ಎರಡು ದಿನಗಳ ಹಿಂದೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಎಂದು ಕಂಡು ಬಂದಿತ್ತು. ಇದರಿಂದ ಹೆಚ್ಚು ರಕ್ತ ಸ್ರಾವವಾಗಿ ನಿನ್ನೆ ರಾತ್ರಿ 8:30ರ ಸುಮಾರಿಗೆ ನಿಧನರಾಗಿದ್ದಾರೆ. ನರಸಿಂಹ ಅವರಿಗೆ ಪದ್ಮಭೂಷಣ, ಪದ್ಮವಿಭೂಷಣ, ರಾಷ್ಟ್ರೀಯ, ಅಂತರಾಷ್ಟ್ರೀಯ ಪುರಸ್ಕಾರಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ದೊರಕಿವೆ. ನರಸಿಂಹ ಅವರು ಪತ್ನಿ ನೀಲಿಮಾ, ಪುತ್ರಿ ಮೈತ್ರೇಯಿ ಅವರನ್ನು ಬಿಟ್ಟು ಅಗಲಿದ್ದಾರೆ