ಹಾಸನ: ಶಿರಾಡಿಘಾಟ್ ರಸ್ತೆ ಸಂಚಾರದ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡುವವರೆಗೂ ಶಿರಾಡಿಘಾಟ್ ಸಂಚಾರಕ್ಕೆ ಅವಕಾಶವಿಲ್ಲ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಹೇಳಿದ್ದಾರೆ. ಶಿರಾಡಿಘಾಟ್ ರಸ್ತೆ ಅಭಿವೃದ್ಧಿ ಹಾಗೂ ಸಂಚಾರ ಸಂಬಂಧ, ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಕಾಮಗಾರಿ ಮುಗಿಯಲು ನಾಲ್ಕೈದು ತಿಂಗಳ ಕಾಲಾವಕಾಶ ಬೇಕು. ರಸ್ತೆ ಕಾಮಗಾರಿ ಸಂಪೂರ್ಣ ಮುಗಿಯುವವರೆಗೂ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಶಿರಾಡಿಘಾಟ್ ಬಂದ್ ಆಗಿರೋದ್ರಿಂದ ಚಿಕ್ಕಮಗಳೂರಿನ ಚಾರ್ಮಾಡಿ ಮೂಲಕ ಮಂಗಳೂರಿಗೆ ತಲುಪಬಹುದು. ಆದರೆ ಈಗ ಸುರಿಯುತ್ತಿರೋ ಮಳೆ ನಡುವೆ ಮತ್ತೆ ಚಾರ್ಮಾಡಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಲಿದೆ. ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಭಾರೀ ಗಾತ್ರದ ವಾಹನಗಳನ್ನ ಚಾರ್ಮಾಡಿಯಲ್ಲಿ ಬಿಡದಿರೋದು ಒಳ್ಳೆಯದು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ…