ಹೆಚ್.ಡಿ ದೇವೇಗೌಡರ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್…

369
firstsuddi

ಬೆಂಗಳೂರು:  ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಇಂದು ಪದ್ಮನಾಭನಗರದ ದೇವೇಗೌಡ ಅವರ ನಿವಾಸದಲ್ಲಿ ನಟ ಶಿವರಾಜ್‍ ಕುಮಾರ್, ಪತ್ನಿ ಗೀತಾ ಹಾಗೂ ಮಧು ಬಂಗಾರಪ್ಪ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್ ಅವರು ದೇವೇಗೌಡರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ಡ್ಯಾನ್ಸ್ ಮಾಡಿದ್ದರಿಂದ ನನಗೂ ಬೆನ್ನು ನೋವಿತ್ತು. ನಾನು ಆಸ್ಪತ್ರೆಗೆ ಹೋಗಿ ಬಂದಿದ್ದೇನೆ. ಈಗ ಆರೋಗ್ಯವಾಗಿದ್ದೇನೆ ಎಂದಿದ್ದಾರೆ.