ಮಂಗಳೂರು: ಆಪರೇಷನ್ ಕಮಲ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಈ ಬಗ್ಗೆ ತನಿಖೆ ನಡೆಸಬೇಕಾದಂತಹ ಅವಶ್ಯತೆ ಇದೆ. ಆಡಿಯೋದಲ್ಲಿ ಸ್ಪೀಕರ್ ರಮೇಶ್ ಕುಮಾರ್,ಅಮಿತ್ ಶಾ, ಪ್ರಧಾನಿಯವರ ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಮಾತು. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಯಡಿಯೂರಪ್ಪ ಅವರು ಇದನ್ನು ಮಿಮಿಕ್ರಿ ಎಂದಿದ್ದಾರೆ. ಇದರ ಸತ್ಯತೆ ಹೊರಗೆ ಬರಬೇಕು. ಆಡಿಯೋದಲ್ಲಿರುವ ಧ್ವನಿ ಬಿಎಸ್ ಯಡಿಯೂರಪ್ಪ ಅವರದ್ದು ಎಂದು ನಾನು ಹೇಳಿಲ್ಲ ಎಂದಿದ್ದಾರೆ.










