ತುಮಕೂರು: ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ಡಾ. ಪರಮೇಶ್ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಪರಮೇಶ್ ಅವರು ಶ್ರೀಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಏರುಪೇರು ಬಂದಿಲ್ಲ. ಇಂದು ಅಥವಾ ನಾಳೆ ಶಿಫ್ಟ್ ಮಾಡಬೇಕೆಂದು ಮಠದ ಹಿರಿಯರು ಹಾಗೂ ಎಸ್‍ಪಿ ಸೇರಿ ಸಭೆ ನಡೆಸಿ ನಿರ್ಧಾರ ಮಾಡಿದ್ದೆವು. ಆದರೆ ರಾತ್ರಿಯಿಂದ ಶ್ರೀಗಳು ಮಠಕ್ಕೆ ಹೋಗಬೇಕೆಂದು ಚಡಪಡಿಸುತ್ತಿದ್ದರು ಆದ್ದರಿಂದ ಬೆಳಗಿನ ಜಾವ ಶ್ರೀಗಳನ್ನು ಶಿಫ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.