ತುಮಕೂರು: ಇಂದು ಗೃಹ ಸಚಿವ ಎಂ.ಬಿ ಪಾಟೀಲ್ ಅವರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಲು ಮಠಕ್ಕೆ ಭೇಟಿ ನೀಡಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ ಪಾಟೀಲ್ ಅವರು ಸಿದ್ದಗಂಗಾ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರು ಆರೋಗ್ಯವಾಗಿದ್ದಾರೆ. ಶ್ರೀಗಳ ಆರೋಗ್ಯದ ಬಗ್ಗೆ ವೈದ್ಯರ ಬಳಿ ಚರ್ಚಿಸಿದ್ದೇನೆ. ಶ್ರೀಗಳ ಆರೋಗ್ಯದ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಶ್ರೀಗಳಿಗೆ ಮಠದಲ್ಲೇ ಆಸ್ಪತ್ರೆ ರೀತಿ ವ್ಯವಸ್ಥೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.










