ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆಯಾಗಿದೆ :ಡಾ.ಪರಮೇಶ್… 

227
firstsuddi

ತುಮಕೂರು:  ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ ಎಂದು ವೈದ್ಯ ಡಾ.ಪರಮೇಶ್  ಅವರು ತಿಳಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಇಂದು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸ್ವಾಮೀಜಿ ಆರೋಗ್ಯದಲ್ಲಿ  ಚೇತರಿಕೆಯಾಗಿದೆ. ಸ್ವಾಮೀಜಿಯವರಿಗೆ ಮಠಕ್ಕೆ ಹೋಗಬೇಕೆಂಬ ಅಪೇಕ್ಷೆ ಇದೆ. ಆದರೆ ಅದು ಸದ್ಯದ ಮಟ್ಟಿಗೆ ಸಾಧ್ಯವಿಲ್ಲ.  ಚೆನ್ನೈಯ ಡಾ. ಮೊಹಮ್ಮದ್ ರೇಲಾ ಅವರ ಸಲಹೆ ಮೇರೆಗೆ ಚಿಕಿತ್ಸೆ ಮುಂದುವರೆಸಿದ್ದೇವೆ ಎಂದಿದ್ದಾರೆ.