ಕೊಪ್ಪಳ : ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ಧಾಳಿ ನಡೆಸಿದ್ದು, ಸಿದ್ದರಾಮಯ್ಯ ಅವರ ಮೈಯಲ್ಲಿ ಜಾತಿವಾದದ ರಕ್ತ ಹರಿಯುತ್ತಿದ್ದು, ಅವರು ಕುರುಬರ ನಾಯಕ ಅಲ್ಲ ಜಾತಿವಾದಿ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಅವರು ಸುಳ್ಳಿನ ಸರದಾರರು. ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಲು ಅಯೋಗ್ಯರು. ಐಟಿ ದಾಳಿ ಬಗ್ಗೆ ಗೌಪ್ಯವಾಗಿಡದೆ ಅದನ್ನು ಬಹಿರಂಗಪಡಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕು ಇಲ್ಲದಿದ್ದರೆ ರಾಜ್ಯಪಾಲರೇ ಅವರನ್ನು ಕಿತ್ತು ಬಿಸಾಕುತ್ತಾರೆ. ಸ್ವಾರ್ಥಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.