ಬೆಂಗಳೂರು:ಟಿ.ನರಸೀಪುರದ ಗರ್ಗೇಶ್ವರಿ ಗ್ರಾಮದಲ್ಲಿ ನಿನ್ನೆ ಸಿದ್ದರಾಮಯ್ಯ ಅವರು ಮಹಿಳೆ ಮೇಲೆ ಗರಂ ಆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ವರುಣ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತೆಯೊಬ್ಬರ ದೀರ್ಘ ಭಾಷಣವನ್ನು ನಿಲ್ಲಿಸಲು ಪ್ರಯತ್ನಿಸುವಾಗ ನಡೆದ ಘಟನೆ ಆಕಸ್ಮಿಕವಾದುದು, ಅದರಲ್ಲಿ ದುರುದ್ದೇಶ ಇರಲಿಲ್ಲ. 15 ವರ್ಷಗಳಿಂದ ನಾನು ಬಲ್ಲ ಆ ಕಾರ್ಯಕರ್ತೆ ನನ್ನಸೋದರಿ ಸಮಾನ.
ವರುಣಾ ಕ್ಷೇತ್ರದಲ್ಲಿ ನಡೆದ ಘಟನೆ ಬಗ್ಗೆ ಪಕ್ಷದ ಕಾರ್ಯಕರ್ತೆ ಜಮಲಾರ್ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ನಾಯಕರು ಘಟನೆಗೆ ರಾಜಕೀಯ ಬಣ್ಣ ಬಳಿಯುವ ಮೂಲಕ ಆ ಹೆಣ್ಣುಮಗಳನ್ನು ಅವಮಾನಿಸುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಮಹಿಳೆಯರ ಮೇಲೆ ಇರುವ ಗೌರವ ಲೋಕಕ್ಕೆ ಗೊತ್ತು. ಇವರಿಂದ ನಾನು ಕಲಿಯುವುದೇನಿಲ್ಲ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.











