ಗೋವಾ ಸಿಎಂ ನಿಧನಕ್ಕೆ ಸಂತಾಪ ಸೂಚಿಸಿದ ಸಿದ್ದರಾಮಯ್ಯ…

164
firstsuddi

ಬೆಂಗಳೂರು : ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಿಧನದ ಸುದ್ದಿ ಆಘಾತ ನೀಡಿದೆ. ಮೃತರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.