ಬೆಂಗಳೂರು: ಸ್ನೇಹಿತರೊಬ್ಬರ ಮದುವೆ ಹಿನ್ನಲೆ ವಿದೇಶಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶದಿಂದ ಬೆಂಗಳೂರಿಗೆ ಹಿಂತಿರುಗಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ 12-30 ರ ಸುಮಾರಿಗೆ ಸಿದ್ದರಾಮಯ್ಯ ಅವರು ಏರ್ ಏಷ್ಯಾ ವಿಮಾನದಲ್ಲಿ ಆಗಮಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಡಿಸೆಂಬರ್ 22 ರಂದು ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದಿದ್ದಾರೆ.










