ಹುಬ್ಬಳ್ಳಿ: ಶ್ರೀರಾಮಲು 420 ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿ.ಎಸ್.ಯಡಿಯೂರಪ್ಪ ಅವರು ಸಿದ್ದರಾಮಯ್ಯ ಅವರು ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ಈ ತರಹದ ಮಾತುಗಳು ಅವರ ಘನತೆಗೆ ತಕ್ಕದ್ದಲ್ಲ. ಶ್ರೀರಾಮಲು ಅವರ ಜೊತೆಗೆ ವಾಲ್ಮೀಕಿ ಸಮುದಾಯವನ್ನೂ ಸಿದ್ದರಾಮಯ್ಯ ಅವಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.










