ಶಿವಮೊಗ್ಗ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಾರಿ ಬಿಜೆಪಿಯವರು ಮಾಡಿದ ಅಪಪ್ರಚಾರದಿಂದ ಸೋಲುಂಟಾಯಿತು. ಬಿಜೆಪಿಯವರ ಅಪಪ್ರಚಾರ ತಡೆಯೋಕೆ ತಯಾರಿ ಮಾಡಿಕೊಂಡಿದ್ದೇವೆ.ಮಂಡ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದು ಅದನ್ನು ಬಗೆಹರಿಸುತ್ತೇವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಲೋಕಸಭಾ ಚುನಾವಣೆಯಲ್ಲೂ ಮುಂದುವರೆಯಲಿದೆ. 2 ಕೋಟಿ ಉದ್ಯೋಗ ಸೃಷಿಸುತ್ತೇವೆ ಎಂದು ನರೇಂದ್ರ ಮೋದಿ ಅವರು ಹೇಳಿದ್ದರು ಆದರೆ 2 ಲಕ್ಷ ಉದ್ಯೋಗ ಸೃಷ್ಟಿ ಮಾಡಲು ಆಗಿಲಿಲ್ಲ. ನರೇಂದ್ರ ಮೋದಿ ಅವರು ಸಿಬಿಐ ಅನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.ಅವರು ವಚನ ಭ್ರಷ್ಟರಾಗಿದ್ದಾರೆ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.










