ಬಳ್ಳಾರಿ: ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ಉಪಚುನಾವಣೆಗೆ ಬಳ್ಳಾರಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಿ.ಎಸ್. ಉಗ್ರಪ್ಪ ಅವರನ್ನು ಹೊರಗಿನಿಂದ ಬಂದವರು ಎಂದು ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಶ್ರೀರಾಮುಲು ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯಲ್ಲಿ ನನ್ನ ವಿರುದ್ಧ ಸ್ಪರ್ಧೆ ಮಾಡಿದ್ದರು. ಹಾಗಾದರೆ ಬಾದಾಮಿಯಲ್ಲಿ ಅವರು ಜನಿಸಿದವರೇ? ಶ್ರೀರಾಮುಲು ಕಣ್ಣು ಬಿಡುವ ಮೊದಲೇ ಉಗ್ರಪ್ಪ ಅವರು ರಾಜಕೀಯಕ್ಕೆ ಪದಾರ್ಪಣೆ ಮಾಡಿದವರು. ಉಗ್ರಪ್ಪ ಅವರು ಲೋಕಸಭೆಗೆ ಹೋದರೆ ಅಲ್ಲಿ ಬಳ್ಳಾರಿ ಸದ್ದು ಮಾಡುತ್ತದೆ. ಶ್ರೀರಾಮುಲು ಅವರಿಗೆ ಹೋಲಿಸಿದರೆ ರಾಜಕೀಯದಲ್ಲಿ ಉಗ್ರಪ್ಪ ಅವರದ್ದು ಮೇರು ವ್ಯಕ್ತಿತ್ವ ಎಂದು ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.










